ಇಲ್ಲಿನ ಹಂಗಾರಕಟ್ಟೆ ಐರೋಡಿ ಯಕ್ಷಗಾನ ಕಲಾಕೇಂದ್ರ ಸಂಸ್ಥಾಪಕ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಮುಖ್ಯ ಶಿಕ್ಷಕ ಐರೋಡಿ ಸದಾನಂದ ಹೆಬ್ಬಾರ್ ಸಂಸ್ಮರಣೆ ಹಾಗೂ ಸದಾನಂದ ಪ್ರಶ್ತಿ ಪ್ರದಾನ ಕಾರ್ಯಕ್ರಮ ಅ.21ರಂದು ಸಾಯಂಕಾಲ 4ಕ್ಕೆ ಕೇಂದ್ರದಲ್ಲಿ ನಡೆಯಲಿದೆ. ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಪ್ರೊ. ಎಂ.ಎ. ಹೆಗಡೆ ಅಧ್ಯಕ್ಷತೆ ವಹಿಸಲಿದ್ದು, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ನಾಗರಾಜ್ ಶೇರೆಗಾರ್, ಉದ್ಯಮಿ ಕೃಷ್ಣಮೂರ್ತಿ ಮಂಜ ಭಾಗವಹಿಸಲಿದ್ದಾರೆ.

ಯಶೋದ ಸಿ.ಹೊಳ್ಳ ಸಂಸ್ಮರಣಾ ಮಾತನಾಡಲಿದ್ದು, ಯಕ್ಷಗಾನ ಸಂಘಟಕ, ಲೋಕಸೇವಾ ಆಯೋಗದ ಅಧ್ಯಕ್ಷ ಡಾ.ಟಿ.ಶ್ಯಾಮ ಭಟ್ ಅವರಿಗೆ ಸದಾನಂದ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ಸಾಂಸ್ಕೃತಿಕ ಕಲಾ ಪ್ರತಿಷ್ಠಾನದ ಎಸ್.ಎನ್. ಪಂಜಾಜೆ ಅಭಿನಂದನಾ ಭಾಷಣ ಮಾಡಲಿದ್ದಾರೆ. ಅನಂತರ ಹಿರಿಯ ಕಲಾವಿದರಿಂದ ಪಾಂಚಜನ್ಯ ಯಕ್ಷಗಾನ ಪ್ರದರ್ಶನ ನಡೆಯಲಿದೆ ಎಂದು ಕಲಾಕೇಂದ್ರ ಕಾರ್ಯದರ್ಶಿ ಐರೋಡಿ ರಾಜಶೇಖರ ಹೆಬ್ಬಾರ್ ತಿಳಿಸಿದ್ದಾರೆ.

error: Content is protected !!
Share This