ಯುವ ಸಮುದಾಯವನ್ನು ಯಕ್ಷಗಾನದತ್ತ ಒಲವು ಮೂಡಿಸುವ ನಿಟ್ಟಿನಲ್ಲಿ ಸಂಪ್ರದಾಯದ ಚೌಕಟ್ಟಿನಲ್ಲಿ ಈ ಕಲೆಯನ್ನು ಬೆಳೆಸುವ ಅಗತ್ಯ ಇದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ| ಕಿಶೋರ್ ಕುಮಾರ್ ಸಿ.ಕೆ. ಅಭಿಪ್ರಾಯಪಟ್ಟರು.

ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು, ಡಾ| ಪಿ. ದಯಾನಂದ ಪೈ ಮತ್ತು ಪಿ. ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಕಲಾಗಂಗೋತ್ರಿ ಯಕ್ಷಗಾನ ಕೇಂದ್ರ ಸೋಮೇಶ್ವರ, ಉಚ್ಚಿಲ ಇದರ ಸಂಯುಕ್ತ ಆಶ್ರಯದಲ್ಲಿ ಕೊಣಾಜೆ ಮಂಗಳೂರು ವಿಶ್ವವಿದ್ಯಾನಿಲಯ ಯಕ್ಷಗಾನ ಕಲಾ ಕೇಂದ್ರದಲ್ಲಿ ನಡೆದ ತೆಂಕುತಿಟ್ಟು ಯಕ್ಷಗಾನ ಹಿಮ್ಮೇಳದ ಕಮ್ಮಟದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.

error: Content is protected !!
Share This