ರಾಜ್ಯ ಯಕ್ಷಗಾನ ಅಕಾಡೆಮಿಯು ವೆಬ್‌ಸೈಟ್‌ನಲ್ಲಿ ಯಕ್ಷಗಾನ ಪ್ರಸಂಗಗಳನ್ನು ಡಿಜಿಟಲೀಕರಣಗೊಳಿಸುವ ನೂತನ ಯೋಜನೆ ಹಮ್ಮಿಕೊಂಡಿದ್ದು, ಯಕ್ಷಗಾನ ಆಸಕ್ತರು ತಮ್ಮ ಬಳಿ ಇರುವ ಯಕ್ಷಗಾನ ಪ್ರಸಂಗಗಳನ್ನು ಅಕಾಡೆಮಿಗೆ ಕಳುಹಿಸಿ ಕೊಡಲು ಕೋರಲಾಗಿದೆ.

ಕಳುಹಿಸುವವರು ರಿಜಿಸ್ಟಾರ್, ಕರ್ನಾಟಕ ಯಕ್ಷಗಾನ ಅಕಾಡೆಮಿ, ಕನ್ನಡ ಭವನ, ಎರಡನೇ ಮಹಡಿ, ಚಾಲುಕ್ಯ ವಿಭಾಗ, ಬೆಂಗಳೂರು ಅವರಿಗೆ ಅ.26ರ ಒಳಗೆ ಕಳುಹಿಸಬೇಕು.

ಹೆಚ್ಚಿನ ವಿವರಗಳಿಗೆ ಅಕಾಡೆಮಿಯನ್ನು ಸಂಪರ್ಕಿಸುವಂತೆ ಅಕಾಡೆಮಿಯ ರಿಜಿಸ್ಟಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Share This