2022ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಳ ಪಟ್ಟಿಯನ್ನು ಘೋಷಿಸಲಾಗಿದ್ದು, ಯಕ್ಷಗಾನ ಕ್ಷೇತ್ರದಲ್ಲಿ ಹಿರಿಯ ವಿದ್ವಾಂಸ, ತಾಳಮದ್ದಳೆ ಅರ್ಥಧಾರಿ ಡಾ. ಎಂ. ಪ್ರಭಾಕರ ಜೋಶಿ, ಹಿರಿಯ ಭಾಗವತರಾದ ಸುಬ್ರಹ್ಮಣ್ಯ ಧಾರೇಶ್ವರ, ಕಲಾವಿದರಾದ ಎಂ.ಎ.ನಾಯಕ್ ಹಾಗೂ ಸರಪಾಡಿ ಅಶೋಕ್ ಶೆಟ್ಟಿ ಅವರಿಗೆ ರಾಜ್ಯೋತ್ಸವ ಪುರಸ್ಕಾರ ಘೋಷಣೆಯಾಗಿದೆ.

ನವೆಂಬರ್ 01ರಂದು ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಅವರ ಉಪಸ್ಥಿತಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ತಲಾ ₹5 ಲಕ್ಷ ನಗದು, 25 ಗ್ರಾಂ. ಚಿನ್ನ ಹಾಗೂ ಪ್ರಶಸ್ತಿ ಫಲಕ ನೀಡಿ ಗೌರವಿಸಲಾಗುವುದು ಎಂದು ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ.

ಯಕ್ಷಗಾನಕ್ಕೆ ಸಂಬಂಧಿಸಿದಂತೆ, ಹೊರನಾಡಿನ ಸೇವಾ ಕ್ಷೇತ್ರದಲ್ಲಿ ಈ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಯಕ್ಷಕಲಾಪೋಷಕರಾದ
ಹೈದರಾಬಾದಿನ ಹೋಟೆಲ್ ಉದ್ಯಮಿ ಮಾರಣಕಟ್ಟೆ ಶ್ರೀ ಕೃಷ್ಣಮೂರ್ತಿ ಮಂಜರು ಭಾಜನರಾಗಿದ್ದರೆ, ವೈದ್ಯಕೀಯ ಕ್ಷೇತ್ರದಲ್ಲಿ ಯಕ್ಷಗಾನ ಕಲಾ ಪೋಷಕರಾದ ಡಾ. ಹೆಚ್.ಎಸ್.ಮೋಹನ್ ಸಾಗರ ಅವರು ಭಾಜನರಾಗಿದ್ದಾರೆ.

error: Content is protected !!
Share This