ಯಕ್ಷಗಾನ ಕ್ಷೇತ್ರದಲ್ಲಿ ಬಹುಮುಖೀ ಸಾಧನೆಗೈದಿರುವ ಡಾ| ಜೋಶಿ ಅವರು ಕರ್ನಾಟಕದ ಬಹುಶ್ರುತ ವಿದ್ವಾಂಸರು. ಕಲಾವಿದ, ಸಂಶೋಧಕ, ಯಕ್ಷಗಾನ ಕೋಶದ ನಿರ್ಮಾಪಕ, ವಿಮರ್ಶಕ, ಸಂಪನ್ಮೂಲ ವ್ಯಕ್ತಿಯಾಗಿ ಅವರದ್ದು ಅಚ್ಚಳಿಯದ ಛಾಪು. 1946ರಲ್ಲಿ ಕಾರ್ಕಳ ತಾಲೂಕಿನ ಮಾಳದಲ್ಲಿ ಜನಿಸಿದ ಅವರದ್ದು ಸಾಹಿತ್ಯಿಕ-ಕಲಾಕುಟುಂಬ. ವಿದ್ಯಾರ್ಥಿ ದೆಸೆಯಿಂದಲೂ ಸಾಹಿತ್ಯ-ಸಂಸ್ಕೃತಿ ಪ್ರೀ ತಿ. ವಾಣಿಜ್ಯದಲ್ಲಿ ಸ್ನಾತಕೋತ್ತರ ಪದವಿ, ಹಿಂದಿ ಸಾಹಿತ್ಯರತ್ನ ಮತ್ತು ಯಕ್ಷಗಾನದಲ್ಲಿ ಪಿಎಚ್ಡಿ. ಮೂರು ದಶಕಗಳ ಕಾಲ ಬೆಸೆಂಟ್ ಸಂಸ್ಥೆಯಲ್ಲಿ ವಾಣಿಜ್ಯ ಪ್ರಾಧ್ಯಾಪಕರಾಗಿ, ಪ್ರಾಂಶುಪಾಲರಾಗಿಯೂ ಅನುಭವ ಹೊಂದಿದ್ದಾರೆ. ಕನ್ನಡ, ಸಂಸ್ಕೃತ, ಮರಾಠಿ, ತುಳು, ಕೊಂಕಣಿ ಸೇರಿದಂತೆ ಬಹುಭಾಷಾ ಜ್ಞಾನಿ. ತಾಳಮದ್ದಳೆ ರಂಗದ ಸಮರ್ಥ ಅರ್ಥದಾರಿ. ಭಾವ ವಿಚಾರಯುಕ್ತ ಅರ್ಥಗಾರಿಕೆಗೆ ಹೆಸರುವಾಸಿ. ಕಲಾವಿದನಾಗಿ ಹೆಗ್ಗುರುತು. ಹತ್ತಕ್ಕೂ ಹೆಚ್ಚು ಕೃತಿಗಳ ಲೇಖಕ, ಯಕ್ಷಗಾನ ಪ್ರಸಂಗ ವಿಮರ್ಶೆಯಲ್ಲಿ ಹಿಡಿತ ಹೊಂದಿದ್ದಾರೆ.
ನಾಡಿನ 67 ಮಂದಿ ಸಾಧಕರನ್ನು ಈ ಬಾರಿ ಆಯ್ಕೆ ಮಾಡಲಾಗಿದೆ. ನ.1ರಂದು ಬೆಂಗಳೂರಿನಲ್ಲಿ ನಡೆಯುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.