ಕಾಂತಾವರ ಕನ್ನಡ ಸಂಘದ ಅಧ್ಯಕ್ಷರಾದ ಡಾ.ನಾ.ಮೊಗಸಾಲೆಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 2023ಸಾಲಿನ ಮತ್ತೆ ಮೂರು ದತ್ತಿನಿಧಿ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಬಾಲಕೃಷ್ಣ ಆಚಾರ್ ಮತ್ತು ಅವರ ಪತ್ನಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ವಾಣಿ ಬಿ. ಆಚಾರ್ ಅವರು ಕನ್ನಡ ಸಂಘದಲ್ಲಿ ಸ್ಥಾಪಿಸಿದ ದತ್ತಿನಿಧಿಯ ‘ಶ್ರೇಷ್ಠ ಶಿಕ್ಷಕ ಸೌರಭ ಪ್ರಶಸ್ತಿ’ಯನ್ನು ಬೆಳ್ತಂಗಡಿಯ ಪ್ರೊ. ಎ. ಕೃಷ್ಣಪ್ಪ ಪೂಜಾರಿ ಅವರಿಗೆ, ಕನ್ನಡ ಸಂಘದಲ್ಲಿ ಮೊಗಸಾಲೆ ಕುಟುಂಬದವರು ಸ್ಥಾಪಿಸಿದ ದತ್ತಿನಿಧಿಯ ‘ಕಾಂತಾವರ ಅಂಕಣ ಸಾಹಿತ್ಯ ಪ್ರಶಸ್ತಿ’ಯನ್ನು ಉಡುಪಿಯ ಡಾ.ಬಿ.ಭಾಸ್ಕರ ರಾವ್ ಅವರಿಗೆ ಮತ್ತು ಕನ್ನಡ ಸಂಘದಲ್ಲಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಅಧ್ಯಾಪಿಕೆ ಸರೋಜಿನಿ ನಾಗಪ್ಪಯ್ಯ ಈಶ್ವರಮಂಗಲ ಅವರು ಸ್ಥಾಪಿಸಿದ ದತ್ತಿನಿಧಿಯ ‘ಕಾಂತಾವರ ಕಾದಂಬರಿ ಸಾಹಿತ್ಯ ಪ್ರಶಸ್ತಿ’ಯನ್ನು ಹಿರಿಯ ಕಾದಂಬರಿಕಾರ ವಿವೇಕಾನಂದ ಕಾಮತ್ ಅವರಿಗೆ ನೀಡುವುದೆಂದು ನಿರ್ಣಯಿಸಲಾಗಿದೆ. ಪ್ರಶಸ್ತಿಯು ತಲಾ 10,000 ರೂ.ಗಳ ಗೌರವ ಸಂಭಾವನೆ, ನಾಮ್ರಪತ್ರ ಮತ್ತು ಸನ್ಮಾನವನ್ನು ಒಳಗೊಂಡಿದ್ದು ಇದೇ ನವಂಬರ್ 1ರಂದು ನಡೆಯುವ ‘ಕಾಂತಾವರ ಉತ್ಸವ’ದಲ್ಲಿ ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರ ಅಧ್ಯಕ್ಷತೆಯಲ್ಲಿ ಈ ಪ್ರಶಸ್ತಿಗಳನ್ನು ಪ್ರದಾನಿಸಲಾಗುವುದೆಂದು ಸಂಘದ ಪ್ರಧಾನ ಕಾರ್ಯದರ್ಶಿ ಸದಾನಂದ ನಾರಾವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Share This