ಯಕ್ಷಾಂಗಣ ಮಂಗಳೂರು ಯಕ್ಷಗಾನ ಚಿಂತನ – ಮಂಥನ ಮತ್ತು ಪ್ರದರ್ಶನ ವೇದಿಕೆಯು ಕರ್ನಾಟಕ ರಾಜ್ಯೋತ್ಸವ ಕಲಾ ಸಂಭ್ರಮವಾಗಿ ನಡೆಸುವ ಯಕ್ಷಗಾನ ತಾಳಮದ್ದಳೆ ಸಪ್ತಾಹದಲ್ಲಿ ನೀಡುವ ಗೌರವ ಪ್ರಶಸ್ತಿಗೆ 2018-19 ನೇ ಸಾಲಿನಲ್ಲಿ ಹಿರಿಯ ಯಕ್ಷಗಾನ ಸ್ತ್ರೀವೇಷಧಾರಿ 82ರ ಹರೆಯದ ಡಾ| ಕೋಳ್ಯೂರು ರಾಮಚಂದ್ರ ರಾವ್ ಆಯ್ಕೆಯಾಗಿದ್ದಾರೆ.

ನ. 23ರಂದು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಜರಗುವ ಯಕ್ಷಗಾನ ತಾಳಮದ್ದಳೆ ಸಪ್ತಾಹ 2019 ಇದರ ಸಮಾರೋಪದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ನ. 17 ರಿಂದ 23ರವರೆಗೆ ರವೀಂದ್ರ ಕಲಾಭವನದಲ್ಲಿ ಜರಗುವ ಯಕ್ಷಾಂಗಣದ 1ನೇ ನುಡಿ ಹಬ್ಬ ಸಂಧಾನ ಸಪ್ತಕ-ತಾಳಮದ್ದಳೆ ಸಪ್ತಾಹದ ಕೊನೆಗೆ ಶ್ರೀ ದೇವಿ ಶಿಕ್ಷಣ ಸಂಸ್ಥೆಗಳ ಆಡಳಿತ ನಿರ್ದೇಶಕ ಎ. ಸದಾನಂದ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರಗುವ ಸಮಾರಂಭದಲ್ಲಿ ಪಂಚ ಮೇಳಗಳ ಸಂಚಾಲಕ, ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ಮಾಜಿ ಸದಸ್ಯ ಪಳ್ಳಿ ಕಿಶನ್ ಹೆಗ್ಡೆ ರಾಮಚಂದ್ರರಾಯರಿಗೆ ಯಕ್ಷಾಂಗಣ ಗೌರವ ಪ್ರಶಸ್ತಿ ಪ್ರದಾನ ಮಾಡುವರು.

ಯಕ್ಷಗಾನ ವಿದ್ವಾಂಸ ಡಾ| ಎಂ. ಪ್ರಭಾಕರ ಜೋಶಿ ಶುಭಾಶಂಸನೆ ಮಾಡಲಿದ್ದು, ಶರವು ರಾಘವೇಂದ್ರ ಶಾಸ್ತಿç, ಹರಿಕೃಷ್ಣ ಪುನರೂರು, ಶಾನಾಡಿ ಅಜಿತ್ ಕುಮಾರ್ ಹೆಗ್ಡೆ, ವೈ. ಸುಧೀರ್ ಕುಮಾರ್ ಶೆಟ್ಟಿ, ವಿ. ಕರುಣಾಕರ್ ಮೊದಲಾದವರಿದ್ದರು ಎಂದು ಭಾಸ್ಕರ ರೈ ಕುಕ್ಕುವಳ್ಳಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

error: Content is protected !!
Share This