ಅಳಿಕೆ ಸಂಸ್ಮರಣೆ, ಪ್ರಶಸ್ತಿ ಪ್ರದಾನದಲ್ಲಿ ಯಕ್ಷಗಾನ ಹಿರಿಯ ಅರ್ಥಧಾರಿ ಡಾ.ಎಂ. ಪ್ರಭಾಕರ ಜೋಶಿ ಹೇಳಿಕೆ

ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದ ಕಲಾಮಂಟಪದಲ್ಲಿ ನಡೆದ ಅಳಿಕೆ ಸಂಸ್ಮರಣೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಿರಿಯ ಪುಂಡುವೇಷಧಾರಿಗಳಾದ ಮಾಡಾವು ಕೊರಗಪ್ಪ ರೈ ಮತ್ತು ಮುಂಡಾಜೆ ಬಾಲಕೃಷ್ಣ ಶೆಟ್ಟಿ ಅವರಿಗೆ 2018-19ನೇ ಸಾಲಿನ ‘ಅಳಿಕೆ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ಎಸ್. ಪ್ರದೀಪ ಕುಮಾರ ಕಲ್ಕೂರ, ಉದ್ಯಮಿ ಎ.ಕೆ. ಜಯರಾಮ ಶೇಖ, ಕರುಣಾಕರ ಶೆಟ್ಟಿ ಪಣಿಯೂರು ಉಪಸ್ಥಿತರಿದ್ದರು.

ತಂತ್ರಜ್ಞಾನಗಳ ಯುಗಾರಂಭವಾಗುವ ಮೊದಲೇ ಯಕ್ಷಾಗಾನದಂಥ ಸಾಂಪ್ರದಾಯಿಕ ರಂಗ ಕಲೆಯನ್ನು ಎತ್ತರಕ್ಕೆ ಬೆಳೆಸಿದವರು ಅಂದಿನ ಶ್ರೇಷ್ಠ ಕಲಾವಿದರು. ಅಳಿಕೆ ರಾಮಯ್ಯ ರೈ ಅಂಥ ಓರ್ವ ಪ್ರಾತಿನಿಧಿಕ ಕಲಾವಿದ ಎಂದು ಹಿರಿಯ ಅರ್ಥಧಾರಿ ಡಾ.ಎಂ.ಪ್ರಭಾಕರ ಜೋಶಿ ಹೇಳಿದರು.

ಅಳಿಕೆ ರಾಮಯ್ಯ ರೈ ಸ್ಮಾರಕ ಟ್ರಸ್ಟ್ ಹಾಗೂ ಯಕ್ಷಾಂಗಣ ಮಂಗಳೂರು, ಯಕ್ಷಗಾನ ಚಿಂತನ-ಮಂಥನ ಮತ್ತು ಪ್ರದರ್ಶನ ವೇದಿಕೆ ಆಶ್ರಯದಲ್ಲಿ ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನ ಕಲಾಮಂಟಪದಲ್ಲಿ ನಡೆದ ‘ಅಳಿಕೆ ಸಂಸ್ಮರಣೆ ಮತ್ತು ಪ್ರಶಸ್ತಿ ಪ್ರದಾನ’ ಸಮಾರಂಭದಲ್ಲಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಶ್ರೀ ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರ ಪಿ.ರಮಾನಂದ ಹೆಗ್ಡೆ ಸಂಸ್ಮರಣಾ ಜ್ಯೋತಿ ಬೆಳಗಿದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ, ಉದ್ಯಮಿ ಎ.ಕೆ. ಜಯರಾಮ ಶೇಖ, ಯಕ್ಷಗಾನ ಸಂಘಟಕ ಮತ್ತು ಉದ್ಯಮಿ ಕರುಣಾಕರ ಶೆಟ್ಟಿ ಪಣಿಯೂರು, ಟ್ರಸ್ಟ್ ಪದಾಧಿಕಾರಿಗಳಾದ ಅಳಿಕೆ ಚಂದ್ರಹಾಸ ಶೆಟ್ಟಿ, ಮಹಾಬಲ ರೈ ಬಜನಿಗುತ್ತು, ಮಹೇಶ್ ಶೆಟ್ಟಿ, ಉಷಾ ನಾರಾಯಣ ಶೆಟ್ಟಿ ಉಪಸ್ಥಿತರಿದ್ದರು.

ಅಳಿಕೆ ರಾಮಯ್ಯ ಶೆಟ್ಟಿ ಸ್ಮಾರಕ ಟ್ರಸ್ಟ್ ಸಂಚಾಲಕ ಅಳಿಕೆ ದುರ್ಗಾಪ್ರಸಾದ್ ರೈ ಸ್ವಾಗತಿಸಿದರು. ಯಕ್ಷಾಂಗಣ ಕಾರ್ಯಾಧ್ಯಕ್ಷ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಪ್ರಾಸ್ತಾವಿಕ ಮಾತನಾಡಿದರು. ಟ್ರಸ್ಟಿ ಅಳಿಕೆ ಬಾಲಕೃಷ್ಣ ಶೆಟ್ಟಿ ವಂದಿಸಿದರು.

ಪ್ರಶಾಂತ ರೈ ಮುಂಡಾಳ ಮತ್ತು ಡಾ. ಪ್ರಖ್ಯಾತ್ ಶೆಟ್ಟಿ ಅಳಿಕೆ ಭಾಗವತಿಕೆಯಲ್ಲಿ ‘ವಾಲಿ ಮೋಕ್ಷ’ ತಾಳಮದ್ದಲೆ ಜರಗಿತು. ಡಾ.ಎಂ.ಪ್ರಭಾಕರ ಜೋಶಿ, ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ, ಉಬರಡ್ಕ, ಉಮೇಶ್ ಶೆಟ್ಟಿ, ಉಮೇಶ್ ಆಚಾರ್ಯ ಗೇರುಕಟ್ಟೆ ಮತ್ತು ಪೂವಪ್ಪ ಶೆಟ್ಟಿ ಅಳಿಕೆ ಅರ್ಥಧಾರಿಗಳಾಗಿದ್ದರು. ರೋಹಿತ್ ಉಚ್ಚಿಲ್, ಹರಿಶ್ಚಂದ್ರ ನಾಯಗ ಮಾಡೂರು ಮತ್ತು ಮಯೂರ್ ನಾಯಗ ಹಿಮ್ಮೇಳದಲ್ಲಿ ಸಹಕರಿಸಿದರು.

ಅಳಿಕೆ ಸಹಾಯ ನಿಧಿ, ಪ್ರಶಸ್ತಿ
ಯಕ್ಷಗಾನದ ಇಬ್ಬರು ಹಿರಿಯ ಪುಂಡುವೇಷಧಾರಿಗಳಾದ ಮಾಡಾವು ಕೊರಗಪ್ಪ ರೈ ಮತ್ತು ಮುಂಡಾಜೆ ಬಾಲಕೃಷ್ಣ ಶೆಟ್ಟಿ ಅವರಿಗೆ 2018-19ನೇ ಸಾಲಿನ ‘ಅಳಿಕೆ ಪ್ರಶಸ್ತಿ’, ತಲಾ 10,000 ರೂ. ಸಹಾಯ ನಿಧಿಯೊಂದಿಗೆ ಸನ್ಮಾನಿಸಲಾಯಿತು. ಹಿರಿಯ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ ಶೆಟ್ಟಿ ಅಭಿನಂದಿಸಿದರು. ಯಕ್ಷಾಂಗಣದ ಸದಸ್ಯರಾದ ತೀರ್ಥಹಳ್ಳಿ ವಿಶ್ವನಾಥ ಶೆಟ್ಟಿ ಮತ್ತು ಉಮೇಶಾಚಾರ್ಯ ಗೇರುಕಟ್ಟೆ ಸನ್ಮಾನ ಪತ್ರ ವಾಚಿಸಿದರು.

error: Content is protected !!
Share This