ಹಿರಿಯ ಕಲಾವಿದರ ಬದುಕು ಮಾದರಿ
ಅಳಿಕೆ ರಾಮಯ್ಯ ರೈ ಅವರಂತಹ ಪ್ರಸಿದ್ಧ ಕಲಾವಿದರು ಯಕ್ಷಗಾನಕ್ಕೆ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅನನ್ಯ. ಯಕ್ಷಗಾನ ಕಲೆಗಾಗಿ ಬದುಕು ತೆತ್ತ ಅನೇಕರು ಇಂದು ನಮ್ಮ ಮುಂದೆ ಮೇರು ವ್ಯಕ್ತಿತ್ವದ ಕಲಾವಿದರಾಗಿ ಉಳಿದಿದ್ದಾರೆ. ಅವರ ಬದುಕು- ಸಾಧನೆ ಕಿರಿಯ ಕಲಾವಿದರಿಗೆ ಮಾದ ರಿಯಾಗಬೇಕು ಎಂದು ಯಕ್ಷಗಾನ ವಿದ್ವಾಂಸ ಡಾ.ಎಂ.ಪ್ರಭಾಕರ ಜೋಶಿ ಹೇಳಿದ್ದಾರೆ.
ಬೆಂಗಳೂರಿನ ದಿ. ಅಳಿಕೆ ರಾಮಯ್ಯ ರೈ ಸ್ಮಾರಕ ಟ್ರಸ್ಟ್ ವತಿಯಿಂದ ಅನಾರೋಗ್ಯದಿಂದಿರುವ ಯಕ್ಷಗಾನ ಕಲಾವಿದ ಜಯಾನಂದ ಸಂಪಾಜೆ ಮತ್ತು ವಿಜಯ ದಂಪತಿಗೆ ಸುಳ್ಯಕ್ಕೋಡಿಯ ಅವರ ನಿವಾಸದಲ್ಲಿ ಗೃಹ ಸಮ್ಮಾನ ನೀಡಿ ಜೋಶಿ ಮಾತನಾಡಿದರು.
ಹಿರಿಯ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ ಶೆಟ್ಟಿ ಅಭಿನಂದನಾ ಭಾಷಣ ಮಾಡಿದರು. ದಿ.ಅಳಿಕೆ ರಾಮಯ್ಯ ರೈ ಅವರ ಪುತ್ರ ಮತ್ತು ಅಳಿಕೆ ಸ್ಮಾರಕ ಟ್ರಸ್ಟ್ ಸಂಚಾಲಕ ಅಳಿಕೆ ದುರ್ಗಾ ಪ್ರಸಾದ್ ರೈ 2020-22 ನೇ ಸಾಲಿನ ಅಳಿಕೆ ಯಕ್ಷ ಸಹಾಯನಿಧಿ ನೀಡಿ ಕಲಾವಿದರನ್ನು ಗೌರವಿಸಿದರು. ಕೆ. ಲಕ್ಷ್ಮೀನಾರಾಯಣ ರೈ ಹರೇಕಳ ಸನ್ಮಾನ ಪತ್ರ ವಾಚಿಸಿದರು.
ಟ್ರಸ್ಟ್ ನಿರ್ದೇಶಕ ಮಹಾಬಲ ರೈ, ಸಂಪಾಜೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಆರ್. ಜಗದೀಶ್ ರೈ, ಸ್ಥಳೀಯರಾದ ಕೇಶವ ಬಂಗ್ಲೆಗುಡ್ಡೆ ಹೇಮಂತ್ ಸಂಪಾಜೆ ಉಪಸ್ಥಿತರಿದ್ದರು. ಟ್ರಸ್ಟ್ ಸಲಹೆಗಾರ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಸ್ವಾಗತಿಸಿದರು. ಸಂಚಾಲಕ ಅಳಿಕೆ ದುರ್ಗಾಪ್ರಸಾದ್ ರೈ ವಂದಿಸಿದರು. ವಿಜಯಾ, ಜಯಾನಂದ, ಯಶೋದಾ ಶೇಷಪ್ಪ, ಮಕ್ಕಳಾದ ನೈರುತ್ಯ, ಭ್ರಾಮರಿ, ಜಾಹ್ನವಿ ಮತ್ತು ಜನ್ಮತಾ ಉಪಸ್ಥಿತರಿದ್ದರು.

