ವಿಶ್ವ ವಿಖ್ಯಾತ ಸಾಲಿಗ್ರಾಮ ಮಕ್ಕಳ ಮೇಳದ ಸ್ಥಾಪಕರಲ್ಲೋರ್ವರಾದ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ, ಸಾಹಿತಿ, ರಂಗನಟ ಕಾರ್ಕಡ ಶ್ರೀನಿವಾಸ ಉಡುಪ ಸಂಸ್ಕರಣ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಕೋಟದ ಪಟೇಲರ ಮನೆಯಂಗಣದಲ್ಲಿ ಫೆ.2 ರಂದು ಸಂಜೆ 3.30 ಕ್ಕೆ ನಡೆಯಲಿದೆ. ಸಚಿವ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತಿಯಲ್ಲಿ ನಡುತಿಟ್ಟಿನ ಪ್ರಸಿದ್ದ ಕಲಾವಿದ ಕೋಡಿ ವಿಶ್ವನಾಥ ಗಾಣಿಗರಿಗೆ ಉಡುಪ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಸಭಾ ಕಾರ್ಯಕ್ರಮದ ಅನಂತರ ಸಂಗೀತ ವೈಭವ ಹಾಗೂ ಯಕ್ಷಗಾನ ಪ್ರದರ್ಶನ ಜರಗಲಿದೆ ಎಂದು ಮಕ್ಕಳ ಮೇಳದ ಕಾರ್ಯದರ್ಶಿ ಸುಜಯೀಂದ್ರ ಹಂದೆ ಎಚ್. ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಉದಯವಾಣಿ

