ಜಾಗತಿಕ ಬಂಟ ಪ್ರತಿಷ್ಠಾನವು ಡಾ.ಡಿ.ಕೆ.ಚೌಟ ದತ್ತಿನಿಧಿ ವತಿಯಿಂದ ಹಿರಿಯ ಯಕ್ಷಗಾನ ಕಲಾವಿದರಿಗೆ ನೀಡುವ ವಾರ್ಷಿಕ ಪಶಸ್ತಿಗೆ 2020-21ನೇ ಸಾಲಿನಲ್ಲಿ ಬಡಗು ತಿಟ್ಟಿನ ಪ್ರಸಿದ್ಧ ಸ್ತ್ರೀವೇಷಧಾರಿ ರಾಜೀವ ಶೆಟ್ಟ ಹೊಸಂಗಡಿ ಆಯ್ಕೆಯಾಗಿದ್ದಾರೆ.

ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಮಾಜಿ ಸದಸ್ಯ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ, ಪಂಚ ಮೇಳಗಳ ಸಂಚಾಲಕ ಪಳ್ಳಿ ಕಿಶನ್‌ ಹೆಗ್ಡೆ ಮತ್ತು ವಿಶ್ರಾಂತ ಪ್ರಾಚಾರ್ಯ, ಪ್ರೊಜಿ.ಆರ್‌. ರೈ ಅವರನ್ನೊಳಗೊಂಡ ಆಯ್ಕೆ ಸಮಿತಿ ರಾಜೀವ ಶೆಟ್ಟರ ಹೆಸರನ್ನು ಪ್ರಶಸ್ತಿಗೆ ಪರಿಗಣಿಸಿದೆ.

ಬಡಗುತಿಟ್ಟಿನ ಹೆಸರಾಂತ ಕಮಲಶಿಲೆ, ಪೆರ್ಡೂರು, ಅಮೃತೇಶ್ವರಿ, ಸೌಕೂರು, ಬಚ್ಚೆಗಾರು, ಸಾಲಿಗ್ರಾಮ ಮತ್ತು ಮಂದರ್ತಿ ಮೇಳಗಳಲ್ಲಿ ದೀರ್ಫಕಾಲ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಹೊಂದಿದ 60ರ ಹರೆಯದ ಜೀವ ಶೆಟ್ಟಿ, ಕುಂದಾಪುರ ತಾಲೂಕಿನ ಹೊಸಂಗಡಿ ಕೆಳಬಾಗಿ ಮನೆಯಲ್ಲಿ ಕುಟುಂಬದೊಂದಿಗೆ ನೆಲೆಸಿದ್ದಾರೆ.

ಪೌರಾಣಿಕ ಪಾತ್ರಗಳಲ್ಲದೆ ಹೊಸ ಪ್ರಸಂಗಗಳ ನಾಗಶ್ರೀ, ಚಿತ್ರಾವತಿ, ರತಿ ರೇಖಾ, ಕಾಮಿನಿ, ಶುಭದ ಮುಂತಾದ ಪ್ರಧಾನ ಸ್ತ್ರೀ ಪಾತ್ರಗಳಲ್ಲಿ ಅವರು ಖ್ಯಾತಿ ಪಡೆದಿದ್ದಾರೆ. ರಾಮ, ಕೃಷ್ಣ ಶಿವ, ಮನ ಮೊದಲಾದ ಪುರುಷ ಪಾತ್ರಗಳಲ್ಲೂ ಹೆಸರು ಗಳಿಸಿದ್ದಾರೆ.

ಪ್ರಶಸ್ತಿಯು 20,000 ರೂ. ನಗದು ಮತ್ತು ಪ್ರಶಸ್ತಿ ಫಲಕವನ್ನೊಳಗೊಂಡಿದೆ. ಜ.23 ರಂದು ಮಂಗಳೂರಿನ ಮೋತಿಮಹಲ್‌ ಸಭಾಂಗಣದಲ್ಲಿ ಜರಗುವ ಜಾಗತಿಕ ಬಂಟ ಫೌಂಡೇಶನ್‌ನ 24ನೇ ವಾರ್ಷಿಕ ಸಮಾವೇಶದಲ್ಲಿ ಟಸ್ಟ್‌ ಅಧ್ಯಕ್ಷ ಡಾ.ಎ.ಜೆ. ಶೆಟ್ಟಿ ಪ್ರಶಸ್ತಿ ಪ್ರದಾನ ಮಾಡುವರೆಂದು ಪ್ರತಿಷ್ಠುನದ ಕಾರ್ಯದರ್ಶಿ ವೈಸುಧೀರ್‌ ಕುಮಾರ್‌ ಶೆಟ್ಟಿ ತಿಳಿಸಿದ್ದಾರೆ.

error: Content is protected !!
Share This