ಮಂಗಳೂರಿನ ಪಾವಂಜೆ ಶ್ರೀ ಜ್ಞಾನ ಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದ ಯಕ್ಷಗಾನ ಮೇಳದ ಎರಡನೇ ವರುಷದ ತಿರುಗಾಟದ ಆರಂಭ ಕ್ಷೇತ್ರದ ಪೂಜ್ಯ ಶ್ರೀ ಶ್ರೀ ಶ್ರೀ ನಿತ್ಯಾನಂದ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆಯಿತು ಈ ಸಂಧರ್ಭ ಮೇಳದ ಪ್ರಧಾನ ಭಾಗವತ ಪಟ್ಲ ಸತೀಶ್ ಶೆಟ್ಟಿ,ಕರ್ನಾಟಕ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಖ್ಯಾತ ಯಕ್ಷಗಾನ ಅರ್ಥಧಾರಿ ಡಾ. ಪ್ರಭಾಕರ್ ಜೋಷಿ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು, ಜಾಗತಿಕ ಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಮಾಜಿ ಸಚಿವ ಅಭಯಚಂದ್ರ ಜೈನ್, ಮತ್ತಿತರರು ಗಣ್ಯರು ಉಪಸ್ಥಿತರಿದ್ದರು. ಪಟ್ಲ ಪೌ0ಡೇಷನ್ ನ ಕಾರ್ಯದರ್ಶಿ ಪುರುಷೋತ್ತಮ್ ಭಂಡಾರಿ ಕಾರ್ಯಕ್ರಮ ನಿರ್ವಹಿಸಿದರು.

error: Content is protected !!
Share This