ಯಕ್ಷಗಾನದ ದಶಾವತಾರಿ ಎಂದೇ ಖ್ಯಾತರಾಗಿದ್ದ ಸಾರ್ವಕಾಲಿಕ ಶ್ರೇಷ್ಠ ಕಲಾವಿದ ಸೂರಿಕುಮೇರಿ ಗೋವಿಂದ ಭಟ್ (88) ನಿನ್ನೆ ತೀರ್ಥಹಳ್ಳಿಯ ಸ್ವಗೃಹದಲ್ಲಿ ವಯೋಸಹಜ ಕಾಯಿಲೆಯಿಂದ ನಿಧನ ಹೊಂದಿದರು. ಅವರು ಮೂವರು ಪುತ್ರರು ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಅಗಲಿದ್ದಾರೆ. ಬಂಟ್ವಾಳ ತಾಲೂಕಿನ ಕುಕ್ಕೆಮನೆಯ ಶಂಕರನಾರಾಯಣ ಭಟ್ ಮತ್ತು...
ತೆಂಕು ತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದ ಮುಂಡ್ಕೂರು ವಸಂತ ಶೆಟ್ಟಿ(83) ನಿನ್ನೆ (21.9.2024) ನಿಧನ ಹೊಂದಿದರು. ಮುಂಡ್ಕೂರು ಕೃಷ್ಣ ಶೆಟ್ಟಿಯವರಲ್ಲಿ ಹೆಜ್ಜೆಗಾರಿಕೆ ಕಲಿತು ಮುಂಡ್ಕೂರು ಮೇಳದಲ್ಲಿ ಹವ್ಯಾಸಿ ವೇಷಧಾರಿಯಾಗಿ, ಮುಂದೆ ಉದ್ಯೋಗ ನಿಮಿತ್ತ ಮುಂಬಯಿ ಸೇರಿ ಯಕ್ಷಗಾನಾಸಕ್ತಿಯಿಂದ ಮತ್ತೆ ಊರಿಗೆ ಬಂದು ಕಟೀಲು ಮೇಳ...
ತೆಂಕುತಿಟ್ಟಿನ ಪ್ರಸಿದ್ಧ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ (76) ಹೃದಯಘಾತದಿಂದ ಇಂದು (05.07.2024) ನಿಧನರಾದರು. ಕುಂಬ್ಳೆ ಕಮಲಾಕ್ಷ ನಾಯಕ್‍ರಲ್ಲಿ ನಾಟ್ಯಾಭ್ಯಾಸ ಹಾಗೂ ಶೇಣಿ ಗೋಪಾಲಕೃಷ್ಣ ಭಟ್ಟರಿಂದ ಅರ್ಥಗಾರಿಕೆಯನ್ನು ಕಲಿತು, 13ನೇ ವಯಸ್ಸಿನಲ್ಲಿಯೇ ಕಲಾ ಸೇವೆಯನ್ನು ಆರಂಭಿಸಿದ ಇವರು ಕುಂಡಾವು, ಕೂಡ್ಲು, ಮುಲ್ಕಿ,...
ಬಡಗು ತಿಟ್ಟಿನ ಪ್ರಸಿದ್ಧ ಭಾಗವತ, ರಾಜ್ಯ ಪ್ರಶಸ್ತಿ ಪುರಸ್ಕೃತ ಸುಬ್ರಹ್ಮಣ್ಯ ಧಾರೇಶ್ವರ (68) ಇಂದು ಮುಂಜಾನೆ ಬೆಂಗಳೂರಿನಲ್ಲಿ ನಿಧನರಾದರು.ಹಂಗಾರಕಟ್ಟೆ ಯಕ್ಷಗಾನ ಕೇಂದ್ರದಲ್ಲಿ ಎಂ.ನಾರ್ಣಪ್ಪ ಉಪ್ಪೂರರ ಶಿಷ್ಯರಾದ ಇವರು,ಕಾಳಿಂಗ ನಾವಡರ ಒಡನಾಡಿಯಾಗಿ ರಂಗ ಪ್ರವೇಶಿಸಿ, ವಿವಿಧ ಮೇಳಗಳಲ್ಲಿ ಮುಖ್ಯವಾಗಿ ಪೆರ್ಡೂರು ಮೇಳದ ಪ್ರಧಾನ...
ಡಾ. ಅಮೃತಸೋಮೇಶ್ವರರು ಇಂದು (06.01.2024) ನಿಧನರಾದರು. ಅವಿಭಜಿತ ದಕ್ಷಿಣಕನ್ನಡದ ಸುಮಾರು ಆರುದಶಕಗಳ ಸಾಂಸ್ಕೃತಿಕ ಚರಿತ್ರೆಯಲ್ಲಿ ಪ್ರಥಮ ಪಂಕ್ತಿಯ ಹೆಸರು ಅಮೃತಸೋಮೇಶ್ವರರದ್ದು. ಕವಿತೆ, ಪ್ರಬಂಧ, ನಾಟಕ, ಕತೆಗಳು, ಸಂಶೋಧನೆ ಹಲವು ವಿಭಾಗಗಳಲ್ಲಿ ಕೃಷಿ ನಡೆಸಿದವರು. ಹೊಸತಲೆಮಾರನ್ನು ಗಾಢವಾಗಿ ಪ್ರಭಾವಿಸಿ, ತಮ್ಮ...
ಸಹೃದಯಿ ಕಲಾಪೋಷಕ, ದಕ್ಷ ಆಡಳಿತಗಾರ,ಕರ್ಣಾಟಕ ಬ್ಯಾಂಕ್‍ನ ನಿವೃತ್ತ ಅಧ್ಯಕ್ಷ ಹಾಗೂ ಸಿ.ಇ.ಒ. ಪಿ. ಜಯರಾಮ ಭಟ್ (71 ವರ್ಷ) ಇಂದು ದೈವಾಧೀನರಾದರು. ತಮ್ಮ ಅಧಿಕಾರಾವಧಿಯಲ್ಲಿ ಶಿಕ್ಷಣ,ಕಲೆ, ಸಾಹಿತ್ಯ , ಧರ್ಮ, ಸಂಸ್ಕೃತಿ ಮತ್ತು ಸಾಮಾಜಿಕ ಸಂಸ್ಥೆಗಳಿಗೆ ನಿರಂತರವಾಗಿ ನೆರವು ನೀಡುತ್ತಿದ್ದ ಸರಳ ಸಜ್ಜನಿಕೆಯ ಜಯರಾಮ ಭಟ್ಟರ ನಿಧನ...