ಪಟ್ಲಗುತ್ತು ಮಹಾಬಲ ಶೆಟ್ಟರಿಗೆ ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇಯ ಯಕ್ಷಶ್ರೀ ರಕ್ಷಾ ಗೌರವ ಪ್ರಶಸ್ತಿ
ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ಇವರ ಪ್ರಾಯೋಜಕತ್ವದಲ್ಲಿ ದುಬಾಯಿ ಮತ್ತು ತಾಯಿನಾಡಿನ ಯಕ್ಷಗಾನ ರಂಗದ ಸಾಧಕರೊಬ್ಬರನ್ನು ಗುರುತಿಸಿ, ವಿಶೇಷವಾಗಿ ವಾರ್ಷಿಕ ಯಕ್ಷಶ್ರೀ ರಕ್ಷಾ ಗೌರವ ಪ್ರಶಸ್ತಿ ನೀಡಲು ಉದ್ದೇಶಿಸಿದಂತೆ, 2022-2023 ರ ಸಾಲಿನ ಪ್ರಶಸ್ತಿಗೆ ಯಕ್ಷಗಾನ ಕಲಾವಿದರೂ, ಸಂಘಟಕರಾಗಿಯೂ ಗುರುತಿಸಿಕೊಂಡ, ಪಟ್ಲ ಗುತ್ತು...
ಯಕ್ಷಧ್ರುವ ಪಟ್ಲ ಸಂಭ್ರಮ
ಹೈಸ್ಕೂಲ್ ಮತ್ತು ಕಾಲೇಜು ವಿದ್ಯಾರ್ಥಿಗಳ ಯಕ್ಷಗಾನ ಸ್ಫರ್ಧೆ ಉದ್ಘಾಟನೆಭಾರತದ ರಂಗಭೂಮಿಯಲ್ಲಿ ಯಕ್ಷಗಾನ ಹೆಮ್ಮೆಯ ಕಲೆ: ಪ್ರಭಾಕರ ಜೋಷಿ ಭಾರತದ ರಂಗಭೂಮಿಯಲ್ಲಿ ಯಕ್ಷಗಾನ ಒಂದು ಹೆಮ್ಮೆಯ ಕಲೆ. ಯಕ್ಷಗಾನ ಸಂಶೋಧನೆಯ ಮೂಲಕ ನೋಡಿದಾಗಲೂ ಯಕ್ಷಗಾನ ವಿಶ್ವಪ್ರಸಿದ್ದಿಯನ್ನು ಪಡೆದ ಕಲೆಯಾಗಿದೆ. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಹೊಸ...
ಅರ್ಥಧಾರಿಗಳು ಪುರಾಣದ ಸಂದೇಶವನ್ನು ಜನಸಾಮಾನ್ಯರಿಗೆ ತಲುಪಿಸುವ ವಾಹಕರು – ಡಾ. ಕಬಿಯಾಡಿ ಹರಿರಾಮ ಆಚಾರ್ಯ
ಯಕ್ಷಗಾನ ಕಲಾರಂಗ ಕಳೆದ 23 ವರ್ಷಗಳಿಂದ ತಾಳಮದ್ದಲೆ ಸಪ್ತಾಹ ಆಚರಿಸುತ್ತಾ ಬಂದಿದ್ದು, ಈ ಬಾರಿಯ ತಾಳಮದ್ದಲೆ ಸಪ್ತಾಹವು ಮೇ 21, 2023ರಂದು ಸಂಜೆ 5.00 ಗಂಟೆಗೆ ಪರ್ಕಳದ ವಿಘ್ನೇಶ್ವರ ಸಭಾಭವನದಲ್ಲಿ ಉದ್ಘಾಟನೆಗೊಂಡಿತು. ಖ್ಯಾತ ವೈದ್ಯ ಡಾ. ಕಬ್ಯಾಡಿ ಹರಿರಾಮ ಆಚಾರ್ಯರು ಸಪ್ತಾಹವನ್ನು ದೀಪ ಬೆಳಗಿಸಿ ಉದ್ಘಾಟಿಸಿ ತಾಳಮದ್ದಲೆಯ...
ಯಕ್ಷಗಾನ ಕಲಾರಂಗ – ತಾಳಮದ್ದಲೆ ಸಪ್ತಾಹ – 2023 ತಾಳಮದ್ದಲೆ ಪ್ರಶಸ್ತಿ ಪ್ರದಾನ ಸಮಾರಂಭ
ಶ್ರೀಕರ ಭಟ್ ಮತ್ತು ಡಾ. ಪಾದೆಕಲ್ಲು ವಿಷ್ಣು ಭಟ್ ಅವರಿಗೆ ಯಕ್ಷಗಾನ ಕಲಾರಂಗ ಪ್ರಶಸ್ತಿ.
ಉಡುಪಿ ಯಕ್ಷಗಾನ ಕಲಾರಂಗವು ಸಹೃದಯಿ ಕಲಾ ಪೋಷಕ ಮಟ್ಟಿ ಮುರಲೀಧರ ರಾವ್ ಮತ್ತು ಅರ್ಥಧಾರಿ, ಪಂಡಿತ ಪೆರ್ಲ ಕೃಷ್ಣ ಭಟ್ ನೆನಪಿನಲ್ಲಿ ನೀಡುವ ಯಕ್ಷಗಾನ ಕಲಾರಂಗ ಪ್ರಶಸ್ತಿಗೆ ಅನುಕ್ರಮವಾಗಿ ಅರ್ಥಧಾರಿ, ಪತ್ರಕರ್ತ, ಲೇಖಕ, ವಿಮರ್ಶಕ, ಸಂಘಟಕ ಶ್ರೀಕರ ಭಟ್ ಹಾಗೂ ಅರ್ಥಧಾರಿ, ಸಂಶೋಧಕ, ಲೇಖಕ, ಪ್ರವಚನಕಾರ ಡಾ. ಪಾದೆಕಲ್ಲು ವಿಷ್ಣು ಭಟ್...
ಅಂಬಲಪಾಡಿ ವೇಷಗಾರಿಕೆ ಕಮ್ಮಟ ಸಮಾರೋಪ
ಅಂಬಲಪಾಡಿ ಶ್ರೀ ಲಕ್ಷ್ಮೀ ಜನಾರ್ದನ ಯಕ್ಷಗಾನ ಕಲಾಮಂಡಳಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡ 5 ದಿನಗಳ ವೇಷಗಾರಿಕೆ ಗಾರಿಕೆ ಕಮ್ಮಟ ಇಂದು 13.05.2023 ಶ್ರೀ ಜನಾರ್ದನ ಮಂಟಪದಲ್ಲಿ ಸಮಾಪನಗೊಂಡಿತು. ನರಸಿಂಹ ತುಂಗ ಮತ್ತು ಮಿಥುನ್ ಕುಮಾರ್ ಇವರ ಮಾರ್ಗದರ್ಶನದಲ್ಲಿ 20 ವಿದ್ಯಾರ್ಥಿಗಳು ವಿವಿಧ ವೇಷಗಳ...
ಅಳಿಕೆ ರಾಮಯ್ಯ ರೈ ಸಂಸ್ಮರಣೆ
ಮಾಹೆಯಿಂದ ಯಕ್ಷಗಾನ ಕಲಾರಂಗ (ರಿ.) ಉಡುಪಿ ಸಂಸ್ಥೆಗೆ ರೂ. 50 ಲಕ್ಷ ಕೊಡುಗೆ.
ಆಧುನಿಕ ಮಣಿಪಾಲದ ಶಿಲ್ಪಿ ಡಾ. ಟಿ. ಎಂ. ಎ. ಪೈ ಅವರಿಂದ ಆರಂಭಗೊಂಡು ಅವರ ಸುಪುತ್ರ ಡಾ. ರಾಮ್‌ದಾಸ್ ಪೈಯವರಿಂದ ಮುಂದುವರಿದು ಪ್ರಸಕ್ತ ಅವರ ಸುಪುತ್ರ ಡಾ. ರಂಜನ್ ಆರ್. ಪೈ ಅವರ ನೇತೃತ್ವದಲ್ಲಿ ಕಾರ್ಯನಿರ್ವಹಿಸುತ್ತಿರುವ ‘ಮಾಹೆ’ ಶಿಕ್ಷಣದೊಂದಿಗೆ ಹಲವು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಕಲೆ, ಸಾಹಿತ್ಯ, ಸಂಸ್ಕೃತಿಯ...
ಕುಡ್ತೇರಿ ಶ್ರೀ ಮಹಾಮಾಯಾ ದೇವಸ್ಥಾನದಲ್ಲಿ ವಾಗೀಶ್ವರಿ ಶತಮಾನೋತ್ಸವ ಸಮಾರೋಪ
https://www.youtube.com/watch?v=jnVqGpktb34
ಮಾರ್ಚ್ 19 ರಂದು ವಾಗೀಶ್ವರಿ ಶತಮಾನೋತ್ಸವ ಸಮಾರೋಪ
ಮನೆ ನಿರ್ಮಾಣಕ್ಕೆ ಪೇಜಾವರ ಶ್ರೀಗಳಿಂದ ಚಾಲನೆ.
ಉಡುಪಿಯ ಹಿರಿಯ ಸಾಮಾಜಿಕ ಸಾಂಸ್ಕೃತಿಕ ಸಂಘಟನೆಯಾದ ಯಕ್ಷಗಾನ ಕಲಾರಂಗವು ಇಲ್ಲಿಯ ತನಕ ಕಲಾವಿದರು ಹಾಗೂ ವಿದ್ಯಾರ್ಥಿಗಳಿಗಾಗಿ 37 ಮನೆಗಳನ್ನು ನಿರ್ಮಿಸಿದ್ದು,ಇದೀಗ ಈ ಮೇ ಒಳಗೆ ಮತ್ತೆ ಹದಿಮೂರು ಮನೆಗಳ ನಿರ್ಮಾಣಕಾರ್ಯ ಇಂದು(12-3-2023)ಪೇಜಾವರ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ದಿವ್ಯ ಸಾನಿಧ್ಯದಲ್ಲಿ ಆರಂಭಗೊಂಡಿತು....
ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನ-2023
ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನ-2023 ರಲ್ಲಿ ಆರು ಗೋಷ್ಠಿಗಳು ಸಂಪನ್ನಗೊಂಡವು. ಪ್ರತಿ ಗೋಷ್ಠಿಗೆ ಒಬ್ಬರು ಅಧ್ಯಕ್ಷರು,ಮೂವರು ಪ್ರಬಂಧಕಾರರು ಮತ್ತು ಒಬ್ಬರು ನಿರ್ವಾಹಕರು ಸೇರಿದಂತೆ 30 ಸಂಪನ್ಮೂಲ ವ್ಯಕ್ತಿಗಳನ್ನು ಆಹ್ವಾನಿಸಲಾಗಿತ್ತು. ಅವರಲ್ಲಿ ಒಬ್ಬರನ್ನುಳಿದು ಎಲ್ಲ ವಿದ್ವಾಂಸರು ಭಾಗವಹಿಸಿದ್ದರು. ಎಲ್ಲಾ ಗೋಷ್ಠಿಗಳು...
ಅಂಬಾತನಯ ಮುದ್ರಾಡಿಯವರಿಗೆ ನುಡಿನಮನ ಕಾರ್ಯಕ್ರಮ
ಹಿರಿಯ ಸಾಹಿತಿ, ಶಿಕ್ಷಕ, ಹರಿದಾಸ,ಜಿನದಾಸ, ಅರ್ಥಧಾರಿ, ಕಲಾವಿದ, ನಾಟಕಕಾರ ಅಂಬಾತನಯ ಮುದ್ರಾಡಿಯವರಿಗೆ ನುಡಿನಮನ ಕಾರ್ಯಕ್ರಮ ಎಲ್ಲ ಸಂಘಟನೆಗಳ ಸಹಯೋಗದೊಂದಿಗೆ ಇಂದು (27-02-2023) ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಜರಗಿತು. ಹಿರಿಯ ವಿದ್ವಾಂಸ ಡಾ. ಎಂ. ಪ್ರಭಾಕರ ಜೋಷಿಯವರು ತಾನು ಅಂಬಾತನ ಮುದ್ರಾಡಿಯವರೊಂದಿಗೆ...














